ಒಂದು ಕಾಲಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಎಸ್.ಮಹೇಂದರ್ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಹೊಸ ಚಿತ್ರವೊಂದಕ್ಕಾಗಿ ಮತ್ತೆ ಒಂದಾಗಿದ್ದಾರೆ. ಶೀಘ್ರದಲ್ಲಿ ಈ ಚಿತ್ರ ಸೆಟ್ಟೇರಲಿದೆ.

‘ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯ, ಹೊಸ ತಲೆಮಾರಿನ ಸಿನಿಮಾಗಳು ಬರುತ್ತಿವೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಕಂಪು ಸೂಸುತ್ತಿವೆ. ಈ ಬೆಳವಣಿಗೆಗೆ ಅಡಿಪಾಯ ಹಾಕಿದವರು, ಆ ಕಾಲಘಟ್ಟದಲ್ಲಿ ಹಲವು ದಾಖಲೆಗಳನ್ನ ಬರೆದವರು ಮತ್ತೆ ಬರುತ್ತಿದ್ದಾರೆ’ ಎಂದು ಚಿತ್ರತಂಡ ಹೇಳಿದೆ.

ಈ ಜೋಡಿ ಸುಮಾರು 20 ಸಿನಿಮಾಗಳಿಗೆ ಜೊತೆಯಾಗಿ ಕೆಲಸ ಮಾಡಿತ್ತು. ಶ್ರೀಗುರುರಾಯರು ಸಿನಿಮಾ ಬ್ಯಾನರ್ನಡಿಯಲ್ಲಿ ಕೆ.ಸಿ ವಿಜಯ ಕುಮಾರ್ ಹೊಸ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಜ.16ರಂದು ಚಿತ್ರ ಸೆಟ್ಟೇರಲಿದೆ. ಉಳಿದ ಮಾಹಿತಿಗಳನ್ನು ಶೀಘ್ರದಲ್ಲಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.