ತಿರುವನಂತಪುರ: ‘ದಿ ಕೇರಳ ಸ್ಟೋರಿ–2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.

ಸೆನ್ಸಾರ್ ಮಂಡಳಿಯು ಚಲನಚಿತ್ರವನ್ನು ಪ್ರಮಾಣೀಕರಿಸುವಾಗ ಮಾರ್ಗಸೂಚಿಗಳನ್ನು ಮನದಲ್ಲಿ ಇಟ್ಟುಕೊಂಡಿಲ್ಲ ಎಂದು ಅದು ಬೇಸರ ವ್ಯಕ್ತಪಡಿಸಿದೆ.

ಸಿನಿಮಾ ಬಿಡುಗಡೆ ವಿರೋಧಿಸಿ ಸಲ್ಲಿಕೆಯಾದ ಎರಡು ಅರ್ಜಿಗಳ ಕುರಿತು ನ್ಯಾಯಮೂರ್ತಿ ಬೇಚು ಕುರಿಯನ್ ಥಾಮಸ್ ಅವರು ಆದೇಶ ಹೊರಡಿಸಿದ್ದಾರೆ.

ಇದೇ 27ರಂದು ಚಲನಚಿತ್ರ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿತ್ತು.

ಚಲನಚಿತ್ರವು ಸಾಮಾಜಿಕ ಸಾಮರಸ್ಯಕ್ಕೆ ಭಂಗ ತರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವ ಮಾರ್ಗಸೂಚಿಗಳನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಪಾಲಿಸಿಲ್ಲ. ಬದಲಿಗೆ ಅದನ್ನು ನಿರ್ಲಕ್ಷಿಸಿರುವುದು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಹೇಳಿದ್ದಾರೆ.

ಅಶಾಂತಿ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡುವ, ಸಾಮಾಜಿಕ ಸಾಮರಸ್ಯ ಹಾಳುಮಾಡುವ ಪ್ರವೃತ್ತಿಯನ್ನು ಹೊಂದಿರುವ ವಿಷಯದ ಪ್ರಸರಣವು ಭಾರತ ಸಂವಿಧಾನದ 19(1)(ಎ) ವಿಧಿಯಡಿ ಪ್ರತಿಪಾದಿಸಲಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಮೂರ್ತಿ ತಿಳಿಸಿದ್ದಾರೆ.

‘ದಿ ಕೇರಳ ಸ್ಟೋರಿ–2’ ಚಿತ್ರವನ್ನು ಫೆ.26ರಿಂದ 13 ದಿನಗಳವರೆಗೆ ಬಿಡುಗಡೆ ಮಾಡುವಂತಿಲ್ಲ. ಚಿತ್ರಕ್ಕೆ ನೀಡಲಾದ ಪ್ರಮಾಣಪತ್ರದ ವಿರುದ್ಧ ಅರ್ಜಿದಾರರಾದ ಶ್ರೀದೇವ್ ನಂಬೂದರಿ ಅವರು ಸಲ್ಲಿಸಿರುವ ಪರಿಷ್ಕರಣಾ ಅರ್ಜಿಯನ್ನು ಎರಡು ವಾರಗಳ ಒಳಗೆ ಪರಿಗಣಿಸಿ ಆದೇಶ ಹೊರಡಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.