ಬೆಂಗಳೂರು: ಇತ್ತೀಚಿಗೆ ತೆರೆ ಕಂಡಿರುವ ಲಿಯೋ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಅವರು ಸಿನಿಮಾ ಪ್ರಚಾರದ ವೇಳೆ ಗಾಯಗೊಂಡಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಲಿಯೋ ಚಿತ್ರದ ಪ್ರಚಾರದ ವೇಳೆ ಲೋಕೇಶ್ ಅವರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಲಿದ್ದಾರೆಂದು ಸುದ್ದಿಸಂಸ್ಥೆ ಪಿಟಿಐ ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಲೋಕೇಶ್, ‘ಸಿನಿಮಾ ಪ್ರಚಾರದ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದೇನೆ. ನಿಮ್ಮನ್ನು( ಅಭಿಮಾನಿ) ಭೇಟಿ ಮಾಡಿ ತುಂಬಾ ಖುಷಿಯಾಗಿದೆ. ಕೊಚ್ಚಿ ಹಾಗೂ ತ್ರಿಶೂರ್ನಲ್ಲೂ ಅಭಿಮಾನಿಗಳನ್ನು ಭೇಟಿ ಮಾಡಬೇಕಿತ್ತು. ಆದರೆ ಗಾಯಗೊಂಡಿರುವುದರಿಂದ ಸಾಧ್ಯವಾಗುತ್ತಿಲ್ಲ. ಶ್ರೀಘ್ರದಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ‘ ಎಂದು ಬರೆದುಕೊಂಡಿದ್ದಾರೆ.