ಬೆಂಗಳೂರು: ಚಂದನವನದ ಚಂದದ ಘಮಲನ್ನು ಪಸರಿಸುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಮೂರನೇ ಆವೃತ್ತಿಗೆ ಭರ್ಜರಿ ಚಾಲನೆ ದೊರಕಿದೆ. ‘ಪ್ರಜಾವಾಣಿ’ಯು ತನ್ನ 75ನೇ ವರ್ಷದ ಸಂದರ್ಭದಲ್ಲಿ ಪ್ರಾರಂಭಿಸಿದ್ದ ಈ ಕಾರ್ಯಕ್ರಮವು ಕರ್ನಾಟಕದ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆಯಾಗಿ ಇದೀಗ ಚಂದನವನದಲ್ಲಿ ಗುರುತಿಸಿಕೊಂಡಿದೆ.