ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ–2 ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ಅವರು ತೆಲಂಗಾಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಇದೇ ಪ್ರಕರಣ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಇಂದು ಬೆಳಿಗ್ಗೆ ಹೈದರಾಬಾದ್ ನಿವಾಸದಲ್ಲಿ ಬಂಧಿಸಿದ್ದು, ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.

‘ಅಲ್ಲು ಅರ್ಜುನ್ ಬಂಧನಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
.ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.VIDEO | ಪುಷ್ಪ-2 ಬಿಡುಗಡೆ: ಅಭಿಮಾನಿಗಳ ಜತೆ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಭಾಗಿ .ಪುಷ್ಪಾ 2 | ಮೃತ ಮಹಿಳೆ ಕುಟುಂಬಕ್ಕೆ ₹25 ಲಕ್ಷ ನೆರವು ಘೋಷಿಸಿದ ಅಲ್ಲು ಅರ್ಜುನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.