ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಯನಾಡು: ಪೊಲೀಸ್–ನಕ್ಸಲರ ನಡುವೆ ಗುಂಡಿನ ಚಕಮಕಿ– ಇಬ್ಬರು ನಕ್ಸಲರ ಬಂಧನ

Published 8 ನವೆಂಬರ್ 2023, 5:20 IST
Last Updated 8 ನವೆಂಬರ್ 2023, 5:20 IST
ಅಕ್ಷರ ಗಾತ್ರ

ವಯನಾಡು(ಕೇರಳ): ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಮಹಿಳೆ ಸೇರಿ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ.

ತಳಪ್ಪುಳ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾ ಪ್ರದೇಶದಲ್ಲಿ ಕೇರಳ ಪೊಲೀಸರ ವಿಶೇಷ ತಂಡಗಳು ಮತ್ತು ನಕ್ಸಲರ ನಡುವೆ ಚಕಮಕಿ ನಡೆದಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಐವರು ನಕ್ಲಲರ ಗುಂಪು ತಮ್ಮ ಮೊಬೈಲ್ ಫೋನ್‌ಗಳನ್ನು ಚಾರ್ಜ್ ಮಾಡಲು ಮನೆಯೊಂದರಲ್ಲಿ ಆಶ್ರಯ ಪಡೆದಾಗ ಈ ಘಟನೆ ಸಂಭವಿಸಿದೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ಮೂವರು ನಕ್ಸಲರು ತಪ್ಪಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆರೆಯ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಿನ್ನೆ ಬಂಧಿತ ನಕ್ಸಲ್ ಪರವಾದಿಯಿಂದ ಪಡೆದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಪ್ರದೇಶದಲ್ಲಿ ಕೇರಳ ಪೊಲೀಸ್ ತಂಡಗಳು ಕೂಂಬಿಂಗ್ ಪ್ರಾರಂಭಿಸಿದ್ದವು.

ಕಾರ್ಯಾಚರಣೆಯ ಸಂದರ್ಭದಲ್ಲಿ, ನಕ್ಸಲರು ವಿಶೇಷ ಕಾರ್ಯಾಚರಣೆ ಪಡೆ ಮತ್ತು ಥಂಡರ್ಬೋಲ್ಟ್ ಸ್ಕ್ವಾಡ್ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಬಂಧಿತ ನಕ್ಸಲರನ್ನು ವಿಚಾರಣೆಗಾಗಿ ಸಮೀಪದ ಪೊಲೀಸ್ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT