ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆ: ಪಿಕಪ್ ವಾಹನ–ಆಟೊ ರಿಕ್ಷಾ ನಡುವೆ ಅಪಘಾತ; 8 ಮಂದಿ ಸಾವು

Published 18 ಡಿಸೆಂಬರ್ 2023, 5:51 IST
Last Updated 18 ಡಿಸೆಂಬರ್ 2023, 5:51 IST
ಅಕ್ಷರ ಗಾತ್ರ

ಮುಂಬೈ: ವೇಗವಾಗಿ ಚಲಿಸುತ್ತಿದ್ದ ಪಿಕಪ್ ವಾಹನವು ಆಟೊ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 150 ಕಿಮೀ ದೂರದಲ್ಲಿರುವ ಓತೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣ್-ಅಹ್ಮದ್‌ನಗರ ರಸ್ತೆಯಲ್ಲಿ ಭಾನುವಾರ ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಅಹ್ಮದ್‌ನಗರದಿಂದ ಕಲ್ಯಾಣ್ (ಥಾಣೆ ಜಿಲ್ಲೆ) ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನವು ಪಿಂಪಲ್‌ಗಾಂವ್ ಜೋಗಾದ ಪೆಟ್ರೋಲ್ ಪಂಪ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಟೊ ರಿಕ್ಷಾದಲ್ಲಿದ್ದ 7 ಮಂದಿ ಮತ್ತು ಪಿಕಪ್ ವಾಹನದ ಚಾಲಕ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT