ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ನಾಡ ಬಾಂಬ್ ಸ್ಫೋಟಿಸಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ಶನಿವಾರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಆರ್ಪಿಎಫ್ 196ನೇ ಬೆಟಾಲಿಯನ್ ಮಹಾದೇವ ಘಾಟ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸಿಬ್ಬಂದಿ ಹದುಗಿಸಿದ್ದ ಬಾಂಬ್ ಮೇಲೆ ಕಾಲಿಟ್ಟಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.ಛತ್ತೀಸಗಢ: ಸುಕ್ಮಾದಲ್ಲಿ ನಕ್ಸಲರು ಅಡಗಿಸಿಟ್ಟಿದ್ದ 10 ಕೆ.ಜಿ ಐಇಡಿ ಪತ್ತೆ.
ಗಾಯಗೊಂಡ ಸಿಬ್ಬಂದಿಯನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಪಕ್ಕದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು.

ಜನವರಿ 6ರಂದು ಬಿಜಾಪುರ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಬಳಸಿ ಬಸ್ ಒಂದನ್ನು ಸ್ಫೋಟಿಸಿದ್ದರು. ಪರಿಣಾಮ 8 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರಿಕ ಮೃತಪಟ್ಟಿದ್ದರು.
.ಮಹಾರಾಷ್ಟ್ರ: ತಾರಕ್ಕ ಸೇರಿ 11 ಮಂದಿ ನಕ್ಸಲರು ಶರಣು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.