ನವದೆಹಲಿ: ಅಹಮದಾಬಾದ್ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಪ್ರಾಥಮಿಕ ತನಿಖಾ ವರದಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿದೆ. 15 ಪುಟಗಳ ಈ ವರದಿಯಲ್ಲಿ ಹಲವು ಅಂಶಗಳು ಬಹಿರಂಗಗೊಂಡಿವೆ.

ವಿಮಾನದ ಎಂಜಿನ್ಗಳಿಗೆ ಇಂಧನ ಪೂರೈಕೆಯಾಗದೆ ಸ್ಥಗಿತಗೊಂಡಿರುವುದೇ ಪತನಕ್ಕೆ ಪ್ರಮುಖ ಕಾರಣವೆಂದು ವರದಿಯಿಂದ ತಿಳಿದುಬಂದಿದೆ.

ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಸಹ ಪೈಲಟ್ ವಿಮಾನ ಚಲಾಯಿಸುತ್ತಿದ್ದು, ಕ್ಯಾಪ್ಟನ್ ಮೇಲ್ವಿಚಾರಣೆ ಮಾಡುತ್ತಿದ್ದರು. ಟೇಕಾಫ್ ಆದ ಕೆಲವೇ ಕ್ಷಣಗಳಿಗೆ ವಿಮಾನದ ಎರಡು ಎಂಜಿನ್ಗಳಿಗೆ ಇಂಧನ ಪೂರೈಕೆಯಾಗುವುದು ನಿಂತಿದೆ. ಪತನವಾಗುವ ಕೆಲವೇ ಸೆಕೆಂಡುಗಳ ಮೊದಲು ‘ಮೇ ಡೇ’ ಕೂಗಿದ್ದಾರೆ.

ಈ ವೇಳೆ ಪೈಲಟ್ಗಳ ನಡುವಿನ ಸಂಭಾಷಣೆ ರೆಕಾರ್ಡ್ ಆಗಿದ್ದು, ಒಬ್ಬ ಪೈಲಟ್ ಇನ್ನೊಬ್ಬ ಪೈಲಟ್ಗೆ ‘ಏಕೆ ಕಟ್ ಆಫ್ ಮಾಡಿದ್ದೀರಿ ಎಂದು ಕೇಳಿದ್ದಾರೆ. ಆಗ ಇನ್ನೊಬ್ಬ ಪೈಲಟ್, ‘ನಾನು ಹಾಗೆ ಮಾಡಿಲ್ಲ’ ಎಂದು ಉತ್ತರಿಸಿದ್ದಾರೆ.

ಜೂನ್ 12ರಂದು ನಡೆದ ಈ ದುರಂತದಲ್ಲಿ ಏರ್ ಇಂಡಿಯಾ ವಿಮಾನ ಸಿಬ್ಬಂದಿ, ಪ್ರಯಾಣಿಕರು ಮತ್ತು ವಿಮಾನ ಬಿದ್ದ ಕಟ್ಟಡದಲ್ಲಿದ್ದವರು ಸೇರಿ 260ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ–171 ವಿಮಾನವು ಅಹಮದಾಬಾದ್ನ ಮೇಘನಿನಗರದ ವೈದ್ಯಕೀಯ ಕಾಲೇಜಿನ ಸಂಕೀರ್ಣದ ಮೇಲೆ ಅಪ್ಪಳಿಸಿತ್ತು.

ದುರಂತದಲ್ಲಿ ಭಾರತದ ಮೂಲದ ಬ್ರಿಟನ್ ಪ್ರಜೆ ಪವಾಡಸದೃಶವಾಗಿ ಬದುಕುಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.