ಜಾಗತಿಕವಾಗಿ ಜನರ ನಡುವೆ ವಿಮಾನಯಾನ ಈಗ ಹೆಚ್ಚು ಜನಪ್ರಿಯವಾಗುತ್ತಿದೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ವಿಮಾನಗಳಲ್ಲಿ ಸಂಚರಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗುತ್ತಿದೆ. ಅದಕ್ಕೆ ಪೂರಕವಾಗಿ ವಿಮಾನಗಳ ಹಾರಾಟದಲ್ಲೂ ಗಣನೀಯವಾಗಿ ಹೆಚ್ಚಳವಾಗಿದೆ. ಇದರ ನಡುವೆಯೇ, ವಿಮಾನಗಳು ಅಪಘಾತಕ್ಕೀಡಾಗುತ್ತಿರುವುದು ಹೆಚ್ಚುತ್ತಿದೆ. 2023ಕ್ಕೆ ಹೋಲಿಸಿದರೆ, 2024ರಲ್ಲಿ ವಿಮಾನ ಅಪಘಾತಗಳು ಹೆಚ್ಚಾಗಿವೆ ಎಂದು ಐಎಟಿಎ ವಾರ್ಷಿಕ ಸುರಕ್ಷತಾ ವರದಿ–2024 ಹೇಳಿದೆ.