ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಿಮಾನ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡ್ ಆಗುವ ಮುನ್ನ ಮತ್ತೊಂದು ವಿಮಾನ ಡಿಕ್ಕಿಯಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ವಿಮಾನ ಸುಟ್ಟು ಕರಕಲಾಗಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷರೂ ಆಗಿರುವ ಅಜಿತ್ ಹಾಗೂ ಅವರ ಸಿಬ್ಬಂದಿ ಇದ್ದ ವಿಮಾನ ಮುಂಬೈನಿಂದ ಬೆಳಿಗ್ಗೆ 8ರ ಸುಮಾರಿಗೆ ಪ್ರಯಾಣ ಆರಂಭಿಸಿತ್ತು. ಅದಾದ ಒಂದು ಗಂಟೆಯಲ್ಲೇ ದುರ್ಘಟನೆ ಸಂಭವಿಸಿದೆ.

ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಬಾರಾಮತಿಗೆ ಹೊರಟಿದ್ದರು. ನಾಲ್ಕು ಕಡೆ ಸಾರ್ವಜನಿಕ ಸಮಾವೇಶ ನಿಗದಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.
.ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.