ನವದೆಹಲಿ: ‘ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ಆಯೋಜಿಸುವುದು ಸಂವಿಧಾನ ಹಾಗೂ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದದ್ದು’ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಏಕಕಾಲಕ್ಕೆ ಚುನಾವಣೆ ಆಯೋಜಿಸುವ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ಸಂದರ್ಭದಲ್ಲಿ ನಡೆದ ಕಾವೇರಿದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
.ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ: 269 ಪರ,198 ವಿರೋಧಿಸಿ ಮತ.ಏಕಕಾಲದಲ್ಲಿ ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ: ಜೆಪಿಸಿಗೆ ಸರ್ಕಾರದ ಇಂಗಿತ.
ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಸಾಮಾನ್ಯ ಮಸೂದೆಯು ಒಕ್ಕೂಟ ರಚನೆಗೆ ವಿರುದ್ಧವಾದದ್ದು ಎಂದು ವಿರೋಧ ಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿದವು. ಮತ ವಿಭಜನೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಾಗ ಮಸೂದೆ ಮಂಡಿಸಲಾಯಿತು.

ಹೊಸ ಸಂಸತ್ ಭವನದಲ್ಲಿ ನಡೆದ ಲೋಕಸಭಾ ಕಲಾಪದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಗಿತ್ತು. ಜತೆಗೆ ಚೀಟಿಯನ್ನೂ ಎಣಿಸಲಾಯಿತು. ಇದರಲ್ಲಿ 269 ಸಂಸದರು ಮಸೂದೆ ಪರವಾಗಿ ಹಾಗೂ 198 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.