ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನೆಡೆಯಾಗಿದೆ.