ಪಟ್ನಾ: 'ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು 'ಮಹಾಘಟಬಂಧನ' ಮೈತ್ರಿಯು ಸರ್ಕಾರ ರಚಿಸುವುದು ಖಚಿತ. ಅದಾದ ನಾಲ್ಕು ದಿನಗಳ ಬಳಿಕ ಪ್ರಮಾಣವಚನ ಸ್ವೀಕರಿಸಲಾಗುವುದು' ಎಂದು 'ಇಂಡಿಯಾ' ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಇಂದು (ಭಾನುವಾರ) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರ್ಜೆಡಿ ನಾಯಕ ತೇಜಸ್ವಿ, 'ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ನವೆಂಬರ್ 18ರಂದು ಪ್ರತಿಜ್ಞಾವಿಧಿ ನಡೆಯಲಿದೆ' ಎಂದು ಹೇಳಿದ್ದಾರೆ.

ಜನಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣದಲ್ಲಿ ಮಾಜಿ ಶಾಸಕ ಅನಂತ್ ಸಿಂಗ್ ಬಂಧನಕ್ಕೆ ಪ್ರತಿಕ್ರಿಯಿಸಿದ ತೇಜಸ್ವಿ, 'ಅದು ನಡೆಯಲೇಬೇಕಿತ್ತು. ಇದೊಂದು ಗಂಭೀರವಾರ ಪ್ರಕರಣ' ಎಂದಿದ್ದಾರೆ.

'ಇಂದು ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯದ ಪರಿಸ್ಥಿತಿಯನ್ನು ಅವರು ಗಮನಿಸಬೇಕು. ರಾಜ್ಯದಲ್ಲಿ ಅಪರಾಧ ನಡೆಯದ ಒಂದೇ ಒಂದು ದಿನವಿಲ್ಲ. ಮಹಾಘಟಬಂಧನ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲವೂ ಬದಲಾಗುತ್ತದೆ' ಎಂದು ಹೇಳಿದ್ದಾರೆ.

243 ಸದಸ್ಯ ಬಲದ ಬಿಹಾರದಲ್ಲಿ ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
.ಟ್ರಂಪ್ ಬಗ್ಗೆ ಮೋದಿಗೆ ಭಯ; ದೊಡ್ಡ ಉದ್ಯಮಿಗಳ 'ರಿಮೋಟ್ ಕಂಟ್ರೋಲ್': ರಾಹುಲ್.Bihar Polls: ಲಾಲು ಮಗ ಸಿಎಂ ಆಗಲು,ರಾಹುಲ್ ಪಿಎಂ ಆಗಲು 2 ಹುದ್ದೆ ಖಾಲಿ ಇಲ್ಲ: ಶಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.