ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿ ನೇಮಿಸಿದ BJP

Published 27 ಜನವರಿ 2024, 10:48 IST
Last Updated 27 ಜನವರಿ 2024, 10:48 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನ್ ದಾಸ್ ಅಗರ್‌ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್‌ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಬೈಜಯಂತ್‌ ಪಾಂಡಾ ಅವರನ್ನು ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಮಹಾರಾಷ್ಟ್ರದ ಬಿಜೆಪಿ ಮುಖಂಡ ವಿನೋದ್‌ ತಾವ್ಡೆ ಅವರನ್ನು ಬಿಹಾರದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT