ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ಉದ್ಘಾಟನೆ; ಬಿಜೆಪಿಯಿಂದ ಲೋಕಸಭೆ ಚುನಾವಣಾ ಗಿಮಿಕ್‌: ಮಮತಾ ಬ್ಯಾನರ್ಜಿ

Published 9 ಜನವರಿ 2024, 11:27 IST
Last Updated 9 ಜನವರಿ 2024, 11:27 IST
ಅಕ್ಷರ ಗಾತ್ರ

ಕೋಲ್ಕತ್ತ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯು ಬಿಜೆಪಿಯಿಂದ ಲೋಕಸಭೆ ಚುನಾವಣಾ ಗಿಮಿಕ್ ಆಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಜಾಯ್‌ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಧಾರ್ಮಿಕ ಆಧಾರದ ಮೇಲೆ ಜನಸಾಮಾನ್ಯರನ್ನು ವಿಭಜಿಸುವುದರಲ್ಲಿ ನನಗೆ ನಂಬಿಕೆ ಇಲ್ಲ. ಇತರ ಸಮುದಾಯಗಳನ್ನು ಹೊರತುಪಡಿಸಿದ ಹಬ್ಬಗಳನ್ನು ನಾನು ಬೆಂಬಲಿಸುವುದಿಲ್ಲ’ ಎಂದು ಹೇಳಿದ್ದಾರೆ.

‘ಎಲ್ಲಾ ಸಮುದಾಯದ ಜನರನ್ನು ಒಳಗೊಳ್ಳುವ ಮತ್ತು ಒಗ್ಗಟ್ಟನ್ನು ಪ್ರದರ್ಶಿಸುವ ಹಬ್ಬಗಳನ್ನು ನಾನು ನಂಬುತ್ತೇನೆ. ರಾಮ ಮಂದಿರ ಉದ್ಘಾಟನೆಯನ್ನು ಬಿಜೆಪಿ ನ್ಯಾಯಾಲಯದ ಸೂಚನೆಯ ಮೇರೆಗೆ ಮಾಡುತ್ತಿದೆ. ಆದರೆ, ಅದನ್ನು ಲೋಕಸಭೆ ಚುನಾವಣೆಗೆ ಗಿಮಿಕ್‌ ಶೋ ಆಗಿ ಪ್ರದರ್ಶಿಸುತ್ತಿದೆ’ ಎಂದು ಮಮತಾ ಟೀಕಿಸಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 6,000ಕ್ಕೂ ಹೆಚ್ಚು ಗಣ್ಯರು ‘ರಾಮ ಪ್ರಾಣ ಪ್ರತಿಷ್ಠಾಪನಾ’ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT