ಮುಂಬೈ: ದೆಹಲಿ ಮತ್ತು ಬಾಂಬೆ ಹೈಕೋರ್ಟ್ಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ–ಮೇಲ್ ಸಂದೇಶ ಬಂದಿದ್ದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಇದರಿಂದಾಗಿ ನ್ಯಾಯಾಲಯಗಳಲ್ಲಿ ವಿಚಾರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದರು.

ದೆಹಲಿ ಹೈಕೋರ್ಟ್ ರಿಜಿಸ್ಟಾರ್ ಅವರಿಗೆ ಬೆಳಿಗ್ಗೆ 8.39ಕ್ಕೆ ಬಂದ ಇ–ಮೇಲ್ನಲ್ಲಿ, ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಮೂರು ಬಾಂಬ್ಗಳನ್ನು ಇರಿಸಿರುವುದಾಗಿ ಬೆದರಿಸಲಾಗಿತ್ತು. ಬಾಂಬೆ ಹೈಕೋರ್ಟ್ನ ಅಧಿಕೃತ ಇ-ಮೇಲ್ ಐಡಿಗೆ ಬಂದ ಸಂದೇಶದಲ್ಲಿ, ಬಾಂಬ್ ಇಟ್ಟು ಕಟ್ಟಡವನ್ನು ಸ್ಫೋಟಿಸುವುದಾಗಿ ಹೇಳಲಾಗಿತ್ತು ಎಂದು ಅಧಿಕಾರಿಯೊಬ್ಬರು ಹೇಳಿದರು.

ಮಾಹಿತಿ ಲಭ್ಯವಾದ ಕೂಡಲೇ ಪೊಲೀಸರು ಮತ್ತು ಇತರ ಸಂಸ್ಥೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಪ್ರಾಥಮಿಕ ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯಗಳ ನ್ಯಾಯಮೂರ್ತಿಗಳು, ವಕೀಲರು, ಸಿಬ್ಬಂದಿ ಮತ್ತು ವೀಕ್ಷಕರನ್ನು ಕೋರ್ಟ್ಗಳ ಆವರಣದ ಆಚೆಗೆ ಕಳುಹಿಸಿದರು.

ಹುಸಿ ಕರೆ: ಪರಿಶೀಲನೆ ಬಳಿಕ ಎರಡೂ ನ್ಯಾಯಾಲಯಗಳಲ್ಲಿ ಯಾವುದೇ ಸ್ಫೋಟಕ ಅಥವಾ ಶಂಕಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ. ನಂತರ ‘ಹುಸಿ ಬಾಂಬ್ ಬೆದರಿಕೆ’ ಎಂದು ಪೊಲೀಸರು ಘೋಷಿಸಿದರು.

ನವದೆಹಲಿ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರು, ‘ಈ ಬೆದರಿಕೆ ಸಂದೇಶಕ್ಕೂ ಕೆಲವು ವಾರಗಳ ಹಿಂದೆ ಶಾಲೆಗಳಿಗೆ ಕಳುಹಿಸಲಾಗಿದ್ದ ಬೆದರಿಕೆ ಸಂದೇಶಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದರು.
.ದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ; ಪೀಠದಿಂದ ಎದ್ದ ನ್ಯಾಯಮೂರ್ತಿಗಳು.ಮುಂಬೈನ ಎಲ್ಲ ಬೀದಿಗಳನ್ನು ತೆರವುಗೊಳಿಸಿ: ಮನೋಜ್ ಜರಾಂಗೆಗೆ ಬಾಂಬೆ ಹೈಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.