ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲು ಮಸೂದೆ ಅಂಗೀಕಾರಕ್ಕೆ 47 ಪಕ್ಷಗಳ ಮುಖ್ಯಸ್ಥರಿಗೆ ಕೆ. ಕವಿತಾ ಪತ್ರ

Published 5 ಸೆಪ್ಟೆಂಬರ್ 2023, 14:24 IST
Last Updated 5 ಸೆಪ್ಟೆಂಬರ್ 2023, 14:24 IST
ಅಕ್ಷರ ಗಾತ್ರ

ಹೈದರಾಬಾದ್‌: ಸಂಸತ್‌ನ ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಈಗಾಗಲೇ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಗೆ ಅಂಗೀಕಾರ ನೀಡಲು ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಭಾರತ ರಾಷ್ಟ್ರ ಸಮಿತಿ ನಾಯಕಿ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಸೇರಿದಂತೆ 47 ಪಕ್ಷಗಳ ಮುಖ್ಯಸ್ಥರಿಗೆ ಈ ಕುರಿತು ಅವರು ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಸೆಪ್ಟೆಂಬರ್‌ 18ರಿಂದ ನಡೆಯುವ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಬೇಕು ಎಂದು ಕೋರಿದ್ದಾರೆ.

ಮಹಿಳೆಯರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವುದು ಪ್ರತ್ಯೇಕ ವಿಷಯವಲ್ಲ. ನ್ಯಾಯಯುತ ಹಾಗೂ ಸಮಾನವಾದ ರಾಜಕೀಯ ಭೂಮಿಕೆ ನಿರ್ಮಾಣವೇ ಇದರ ಹಿಂದಿರುವ ಮೂಲ ಆಶಯವಾಗಿದೆ. ಹಾಗಾಗಿ, ರಾಜಕೀಯ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಮಸೂದೆಯ ಅಂಗೀಕಾರಕ್ಕೆ ಒಮ್ಮತ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸೇರಿದಂತೆ ವಿವಿಧ ಪಕ್ಷಗಳ ಮುಖ್ಯಸ್ಥರಿಗೆ ಬರೆದಿರುವ ಪತ್ರದಲ್ಲಿ ಮಸೂದೆಯ ಮಹತ್ವ ಕುರಿತು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT