ನವದೆಹಲಿ: ಪಂಜಾಬ್ ಬಳಿ ಆಕಸ್ಮಿಕವಾಗಿ ಗಡಿ ದಾಟಿದ ಗಡಿ ಭದ್ರತಾ ಪಡೆ (BSF) ಯೋಧನನ್ನು ಪಾಕಿಸ್ತಾನಿ ಸೇನೆ ಸೆರೆ ಹಿಡಿದಿದೆ. ಯೋಧನ ಬಿಡುಗಡೆಗೆ ಉಭಯ ರಾಷ್ಟ್ರಗಳ ಸೇನಾಧಿಕಾರಿಗಳ ನಡುವೆ ಮಾತುಕತೆ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

182ನೇ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿ.ಕೆ. ಸಿಂಗ್ ಬಂಧಿತ ಯೋಧ. ಫಿರೋಜ್ಪುರ್ ಗಡಿ ಬಳಿ ಬುಧವಾರ ಇವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿತ್ತು.

ಸಿಂಗ್ ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.

ಇಂಥ ಘಟನೆಗಳು ಎರಡೂ ಕಡೆಯಿಂದ ಆಗಾಗ್ಗ ನಡೆಯುತ್ತಲೇ ಇರುತ್ತವೆ. ಹೀಗಾಗಿ ಇದು ವಿಶೇಷ ಪ್ರಕರಣವಲ್ಲ. ಆದರೆ ಪಹಲ್ಗಾಮ್ ಘಟನೆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ಸೃಷ್ಟಿಯಾಗಿರುವುದರಿಂದ ಈ ಘಟನೆ ಮಹತ್ವ ಪಡೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.