ಅಧಿವೇಶನ ಬಹಿಷ್ಕಾರ; ಸಭಾತ್ಯಾಗ
‘ವಿರೋಧ ಪಕ್ಷದ ಮುಖಂಡರನ್ನು ಮಟ್ಟಹಾಕಲು ಸರ್ಕಾರ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು’ ಎಂದು ಭೂಪೇಶ್ ಬಘೇಲ್ ಹೇಳಿದ್ದಾರೆ.
ಚೈತನ್ಯ ಬಘೇಲ್ ಬಂಧನದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಶುಕ್ರವಾರ ವಿಧಾನಸಭೆ ಅಧಿವೇಶನ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು. ವಿರೋಧ ಪಕ್ಷಕ್ಕೆ ಕಿರುಕುಳ ನೀಡಲು ಇ.ಡಿಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.