ನವದೆಹಲಿ: ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಗುರುವಾರ ನೇಮಕಗೊಂಡಿದ್ದಾರೆ. ನ. 24ರಂದು ಇವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸೂರ್ಯ ಕಾಂತ್ ಅವರು ನೀಡಿದ ಪ್ರಮುಖ ತೀರ್ಪುಗಳು

ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಇವುಗಳಲ್ಲಿ ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಭ್ರಷ್ಟಾಚಾರ, ಪರಿಸರ ಹಾಗೂ ಲಿಂಗ ಸಮಾನತೆ ಪ್ರಕರಣಗಳು ಸೇರಿವೆ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದರು. ವಸಾಹತು ಯುಗದ ದೇಶದ್ರೋಹ ಕಾನೂನಿಗೆ ತಡೆ ನೀಡಿದ್ದ ಪೀಠದಲ್ಲಿದ್ದರು

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಸಮಯದಲ್ಲಿ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾದ 65 ಲಕ್ಷ ಹೆಸರುಗಳ ವಿವರಗಳನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದರು

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಸೇರಿದಂತೆ ಬಾರ್ ಅಸೋಸಿಯೇಷನ್ ಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡ ಬೇಕೆಂದು ನಿರ್ದೇಶಿಸಿದ ಕೀರ್ತಿಯೂ ನ್ಯಾ. ಸೂರ್ಯ ಕಾಂತ್ ಅವರಿಗೆ ಸಲ್ಲುತ್ತದೆ

.ಸುಪ್ರೀಂ ಕೋರ್ಟ್ಗೆ ನೂತನ CJI ನೇಮಕ: ಬುಡ್ಡಿ ದೀಪದ ಬೆಳಕಲ್ಲಿ ಅರಳಿದ ‘ಸೂರ್ಯ’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.