ನವದೆಹಲಿ: ನೂತನ ಚುನಾವಣಾ ಆಯುಕ್ತರ (ಸಿಇಸಿ) ನೇಮಕ ಸಂಬಂಧ ರಚಿಸಲಾಗಿರುವ ಆಯ್ಕೆ ಸಮಿತಿಯ ಮಾನ್ಯತೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರನೆಯನ್ನು ಸುಪ್ರೀಂ ಕೋರ್ಟ್ ಫೆಬ್ರುವರಿ 19ರಂದು ನಡೆಸಲಿದೆ. ಅಲ್ಲಿಯವರೆಗೆ, ಸರ್ಕಾರವು ನೇಮಕ ಪ್ರಕ್ರಿಯೆಯನ್ನು ಮುಂದವರಿಸಬಾರದು ಎಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡ ಸಮಿತಿ ಸಭೆಯು ಇಂದು (ಸೋಮವಾರ) ಪ್ರಧಾನಿ ನಿವಾಸದಲ್ಲಿ ನಡೆದಿದೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ಈ ಹೇಳಿಕೆ ನೀಡಿದೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅಭಿಷೇಕ್ ಸಿಂಘ್ವಿ, 'ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡಲಾಗಿದೆ. ಆ ಮೂಲಕ ಚುನಾವಣಾ ಆಯೋಗವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಹಾಗೂ ವಿಶ್ವಾಸಾರ್ಹತೆಯನ್ನು ನಾಶ ಮಾಡಲು ಸರ್ಕಾರ ಯತ್ನಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ' ಎಂದು ಆರೋಪಿಸಿದ್ದಾರೆ.

ಸಿಇಸಿ ಹಾಗೂ ಇತರ ಆಯುಕ್ತರ ನೇಮಕಕ್ಕೆ ರೂಪಿಸಲಾಗಿರುವ ಕಾಯ್ದೆಯನ್ನು ಪ್ರಶ್ನಿಸಿರುವ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮುಂದಿನ ವಿಚಾರಣೆಯನ್ನು ಫೆಬ್ರುವರಿ 19ಕ್ಕೆ ನಿಗದಿಯಾಗಿದೆ. ಇನ್ನು ಕೇವಲ 48 ಗಂಟೆಯಷ್ಟೇ ಇದೆ. ತುರ್ತಾಗಿ ವಿಚಾರಣೆ ಕೋರಿ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಬೇಕು. ಆದೇಶದ ನಂತರವೇ ನಿರ್ಧಾರ ಕೈಗೊಳ್ಳಬೇಕು ಎಂದು ಸಿಂಘ್ವಿ ಸಲಹೆ ನೀಡಿದ್ದಾರೆ.
.ಮುಖ್ಯ ಚುನಾವಣಾ ಆಯುಕ್ತರ ಹೆಸರು ಅಂತಿಮ: ಮೋದಿ, ಶಾ, ರಾಹುಲ್ ಭಾಗಿ; ಘೋಷಣೆ ಶೀಘ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.