ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಮೃತರ ಒಟ್ಟು ಸಂಖ್ಯೆಯನ್ನು ತಕ್ಷಣ ಬಹಿರಂಗಪಡಿಸುವಂತೆ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ ಸುದ್ದಿ ಅತ್ಯಂತ ದುಃಖಕರವಾಗಿದೆ. ನಿಲ್ದಾಣದಿಂದ ಬರುವ ವಿಡಿಯೊಗಳು ಹೃದಯ ವಿದ್ರಾವಕವಾಗಿವೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆಯನ್ನು ಮರೆಮಾಚುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನ ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯವಾಗಿದೆ’ ಎಂದಿದ್ದಾರೆ.

‘ಮೃತರ ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಸಂಖ್ಯೆಯನ್ನೂ ಬಹಿರಂಗಪಡಿಸಿ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
.ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಸಾವು.ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.