ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅ. 27ರ ಹೊತ್ತಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇದರಿಂದಾಗಿ ಮುಂದಿನ 2ರಿಂದ 3 ದಿನಗಳ ಕಾಲ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅ. 25ರಂದು ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ಅ. 26ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆಯ ಬುಲೆಟಿನ್ ತಿಳಿಸಿದೆ.

ಚಂಡಮಾರುತದ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ. 28ರವರೆಗೂ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.

ಈ ಬಾರಿಯ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್ನ ‘ಮೊಂಥಾ’ ಎಂಬ ಹೆಸರನ್ನು ಇಡಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಚಂಡಮಾರುತದ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕಾಗಿ 1,436 ಮೋಟಾರ್ ಪಂಪ್ಗಳು, 150 ಅಧಿಕ ಸಾಮರ್ಥ್ಯದ (100 ಅಶ್ವಶಕ್ತಿ) ಪಂಪ್ಗಳು, 500 ಟ್ರ್ಯಾಕ್ಟರ್ ಆಧಾರಿತ ಪಂಪ್ಗಳು, 478 ವಾಹನ ಮತ್ತು ಯಂತ್ರಗಳು ಹಾಗೂ 457 ಮರ ಕತ್ತರಿಸುವ ಯಂತ್ರಗಳನ್ನು ಸರ್ಕಾರ ಸಜ್ಜುಗೊಳಿಸಿದೆ.

ಒಟ್ಟು 215 ಸ್ಥಳಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. 106 ಸಮುದಾಯ ಅಡುಗೆ ಕೋಣೆಗಳನ್ನು ಸಜ್ಜುಗೊಳಿಸಲಾಗಿದೆ. ಚಂಡಮಾರುತ ಪರಿಸ್ಥಿತಿ ಎದುರಿಸಲು 24,149 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಇದ್ದಾರೆ. 103 ದೋಣಿಗಳನ್ನೂ ನಿಯೋಜಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.