ನವದೆಹಲಿ: ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ವಿರುದ್ಧ ದೆಹಲಿ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದ್ರ ಜೈನ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ನ್ಯಾಯಾಲಯವು ಇಂದು (ಗುರುವಾರ) ವಜಾಗೊಳಿಸಿದೆ.

ಫೆಬ್ರುವರಿ 14ರಂದು ಪ್ರಕರಣದ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿದ್ದರು.

ಸತ್ಯೇಂದ್ರ ಜೈನ್ ನಿವಾಸದಲ್ಲಿ ₹3 ಕೋಟಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ ಎಂದು 2023ರಲ್ಲಿ ಬಾನ್ಸುರಿ ಸ್ವರಾಜ್ ಆರೋಪಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದರ್ ಜೈನ್ ಅವರ ವಿಚಾರಣೆ ನಡೆಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮತಿ ನೀಡಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218ರ ಅಡಿಯಲ್ಲಿ ಅನುಮತಿ ಕೇಳಲಾಗಿತ್ತು.

‘ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆಯ ಅಂಶಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದಲ್ಲಿ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಪತಿ ಅವರಿಗೆ ಮನವಿ ಮಾಡಿತ್ತು’ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿ ಸತ್ಯೇಂದರ್ ಜೈನ್ ಅವರನ್ನು 2022ರ ಮೇ ನಲ್ಲಿ ಇ.ಡಿ ಬಂಧಿಸಿತ್ತು. ಸದ್ಯ ಜಾಮೀನಿನ ಅವರು ಮೇಲೆ ಹೊರಗಿದ್ದಾರೆ. ಅವರ ವಿರುದ್ಧದ ದೋಷಾರೋಪ ಪಟ್ಟಿಯನ್ನು ಇ.ಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.