ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿರುದ್ಧ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ದೆಹಲಿ ಕೋರ್ಟ್ ವಜಾ ಮಾಡಿದೆ.

ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ನ ನ್ಯಾಯಾಧೀಶರಾದ ಪಾರಸ್ ದಲಾಲ್, ಅವರು ‘ಮಾನಹಾನಿ ಅಂಶ ಕಾಣುತ್ತಿಲ್ಲ’ ಎಂದು ತಿಳಿಸಿ, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಲು ನಿರಾಕರಿಸಿದರು.

‘2024ರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಿದ್ದಾರೆ’ ಎಂದು ಶಶಿ ತರೂರ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ರಾಜೀವ್ ಚಂದ್ರಶೇಖರ್ ಮೊಕದ್ದಮೆ ಹೂಡಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರು ಹಾಳುಮಾಡಿದ್ದಕ್ಕಾಗಿ ತಮಗೆ ತರೂರ್ ಅವರು ₹10 ಕೋಟಿ ಪರಿಹಾರ ಕೊಡಬೇಕು ಎಂದು ರಾಜೀವ್ ಕೋರಿದ್ದು, ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿ ದೆಹಲಿ ಹೈಕೋರ್ಟ್ ಸೋಮವಾರ ಆದೇಶಿಸಿತ್ತು. ಅಲ್ಲದೆ ಏಪ್ರಿಲ್ 28ಕ್ಕೆ ವಿಚಾರಣೆ ನಿಗದಿಪಡಿಸಲಾಗಿದೆ ಎಂದು ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ತಿಳಿಸಿದ್ದರು.
.ಶಶಿ ತರೂರ್ ವಿರುದ್ಧ ಚಂದ್ರಶೇಖರ್ ಮಾನಹಾನಿ ಪ್ರಕರಣ: ದೆಹಲಿ ಹೈಕೋರ್ಟ್ ಸಮನ್ಸ್.ರಕ್ಷಣಾ ಇಲಾಖೆಗೆ ಹೆಚ್ಚಿನ ಅನುದಾನ: ಕೇಂದ್ರದ ನಿರ್ಧಾರಕ್ಕೆ ಶಶಿ ತರೂರ್ ಬಹುಪರಾಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.