ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಮತ್ತೆ ಸರ್ಕಾರ ರಚಿಸಿದರೆ, ಆದ್ಯತೆಯ ಆಧಾರದ ಮೇಲೆ ದೆಹಲಿಯ ಒಳಚರಂಡಿ ಸಂಬಂಧಿತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಅವರು ವಿಡಿಯೊ ಸಂದೇಶವನ್ನು ಅವರು ಬಿಡುಗಡೆ ಮಾಡಿದ್ದಾರೆ.
.ಕೇಜ್ರಿವಾಲ್ ಕೊಲ್ಲಲು ಕೇಂದ್ರ, ದೆಹಲಿ ಪೊಲೀಸ್ ಸಂಚು: ಎಎಪಿ ಆರೋಪ.
ನಗರದ ಅನಧಿಕೃತ ಕಾಲೋನಿಗಳಲ್ಲಿ ತಮ್ಮ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ವಿಡಿಯೊ ಸಂದೇಶದಲ್ಲಿ ಎತ್ತಿ ತೋರಿಸಿದ್ದಾರೆ. ಈ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಹೇಳಿದ್ದಾರೆ.

‘ನಾವು ದೆಹಲಿಯಲ್ಲಿ ಸರ್ಕಾರ ರಚಿಸಿದಾಗ ಅನಧಿಕೃತ ಕಾಲೋನಿಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಈ ಕಾಲೋನಿಗಳ ಅಭಿವೃದ್ಧಿಗೆ ಯಾವುದೇ ಸರ್ಕಾರಗಳು ಕೆಲಸ ಮಾಡಲಿಲ್ಲ. ನಾವು ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇವೆ. ಇಂದು ಅಂತಹ ಬಹುತೇಕ ಎಲ್ಲಾ ಕಾಲೋನಿಗಳಲ್ಲಿ ಒಳಚರಂಡಿ ಪೈಪ್ಲೈನ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿವೆ’ ಎಂದು ಅವರು ಹೇಳಿದರು.
.ದೆಹಲಿ: ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್.
ನಗರದ ಹಲವಾರು ಪ್ರದೇಶಗಳು ಕೊಳಚೆ ನೀರು, ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವುದನ್ನೂ ಇದೇ ವೇಳೆ ಅವರು ಒಪ್ಪಿಕೊಂಡಿದ್ದಾರೆ.

‘ಎಎಪಿ ಸರ್ಕಾರವನ್ನು ರಚಿಸಿದರೆ, ನಗರದಾದ್ಯಂತ ಎಲ್ಲಾ ಒಳಚರಂಡಿ ಸಂಬಂಧಿತ ಸಮಸ್ಯೆಗಳನ್ನು ಯುದ್ಧೋಪಾದಿಯಲ್ಲಿ ಪರಿಹರಿಸಲು ನಾನು ನಿರ್ಧರಿಸಿದ್ದೇನೆ’ ಎಂದು ಅವರು ಹೇಳಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8 ರಂದು ಮತ ಎಣಿಕೆ ನಡೆಯಲಿದೆ.
.ಮಡಿವಾಳರಿಗೆ 7 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.