ನವದೆಹಲಿ: ನಾಳೆ (ಫೆ.8) ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರಗಳ ಬಳಿ ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ಸೇರಿದಂತೆ ಮೂರು ಹಂತದ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನಾಳಿನ ಮತ ಎಣಿಕೆಗಾಗಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಎಣಿಕೆ ಕೇಂದ್ರಗಳ ಒಳಗೆ ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಲಾಗುವುದು. ಅಲ್ಲದೆ, ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತದೆ’ ಎಂದು ವಿಶೇಷ ಪೊಲೀಸ್ ಆಯುಕ್ತ ದೇವೇಶ್ ಚಂದ್ರ ಶ್ರೀವಾಸ್ತವ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಈಗಾಗಲೇ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ವಿಧ್ವಂಸಕ ಕೃತ್ಯಗಳ ನಡೆಯದಂತೆ ದೆಹಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸುಗಮ ವಾಹನ ಸಂಚಾರಕ್ಕಾಗಿ ಸಂಚಾರ ನಿರ್ವಹಣಾ ಯೋಜನೆಯನ್ನು ರೂಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆ.5ರಂದು ಮತದಾನ ನಡೆದಿತ್ತು. ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.