ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಶನಿವಾರವೂ ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗೆ ವಾರದಲ್ಲಿ ಬೆದರಿಕೆ ಬರುತ್ತಿರುವುದು ಇದು ಮೂರನೇ ಬಾರಿ.
.ದೆಹಲಿಯ 30 ಶಾಲೆಗಳಿಗೆ ಬಾಂಬ್ ಬೆದರಿಕೆ.
ಆರ್.ಕೆ ಪುರದ ದೆಹಲಿ ಪಬ್ಲಿಕ್ ಸ್ಕೂಲ್ಗೆ ಬೆಳಿಗ್ಗೆ 6.09ಕ್ಕೆ ಬೆದರಿಕೆ ಕರೆ ಬಂದಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿ ಶಾಮಕ ದಳ, ಸ್ಥಳೀಯ ಪೊಲೀಸ್, ಶ್ವಾನದಳ ಹಾಗೂ ಬಾಂಬ್ ಪತ್ತೆ ದಳ ಸ್ಥಳಕ್ಕೆ ದೌಡಾಯಿಸಿ ಬಾಂಬ್ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿವೆ.

‘ಸ್ಥಳದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಆದರೂ ಶೋಧ ಮುಂದುವರಿಸಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ದೆಹಲಿ: ಮತ್ತೆ 6 ಶಾಲೆಗಳಿಗೆ ಬಾಂಬ್ ಬೆದರಿಕೆ.
ಶುಕ್ರವಾರ ಸುಮಾರು 30 ಶಾಲೆಗಳಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಸೋಮವಾರ ಸುಮಾರು 44 ಶಾಲೆಗಳಿಗೆ ಇದೇ ರೀತಿಯ ಇ–ಮೇಲ್ ಬಂದಿತ್ತು. ಅಲ್ಲೆಲ್ಲಾ ಭದ್ರತಾ ಪಡೆಗಳು ಶೋಧ ನಡೆಸಿದ್ದವು.

ಅವೆಲ್ಲಾ ಹುಸಿ ಬಾಂಬ್ ಬೆದರಿಕೆ ಎಂದು ಶೋಧಕಾರ್ಯಾಚರಣೆ ಬಳಿಕ ಪೊಲೀಸರು ಹೇಳಿದ್ದರು.
.ಆಳ-ಅಗಲ | ಹುಸಿ ಬಾಂಬ್ ಕರೆ: ಸರ್ಕಾರ, ಸಂಸ್ಥೆಗೆ ಹೊರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.