ಚೆನ್ನೈ: ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಕೆ.ಪೊನ್ಮುಡಿ ಅವರು ಶೈವ–ವೈಷ್ಣವ ಪಂಥದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ, ಪೊನ್ಮುಡಿ ಅವರನ್ನು ಪಕ್ಷದ ಪ್ರಮುಖ ಹುದ್ದೆಯಿಂದ ವಜಾ ಮಾಡಲಾಗಿದೆ.

ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ‘ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪೊನ್ಮುಡಿ ಅವರನ್ನು ಕೈಬಿಡಲಾಗಿದೆ’ ಎಂದು ಘೋಷಿಸಿದ್ದಾರೆ. ಆದರೆ ಇದಕ್ಕೆ ಯಾವುದೇ ಕಾರಣವನ್ನು ಅವರು ತಿಳಿಸಿಲ್ಲ.

ಇದೇ ಸಂದರ್ಭದಲ್ಲಿ, ಪೊನ್ಮುಡಿ ಅವರ ಸ್ಥಾನಕ್ಕೆ ರಾಜ್ಯಸಭಾ ಸದಸ್ಯ ತಿರುಚಿ ಶಿವಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಖಂಡನೆ:

ಪೊನ್ಮುಡಿ ಅವರ ಹೇಳಿಕೆಯನ್ನು ಡಿಎಂಕೆ ಸಂಸದೆ ಕನಿಮೋಳಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಸೇರಿ ಹಲವರು ಖಂಡಿಸಿದ್ದಾರೆ. ಪೊನ್ಮುಡಿ ಅವರನ್ನು ಸಚಿವ ಸಂಪುಟದಿಂದಲೂ ವಜಾ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಪೊನ್ಮುಡಿ ಅವರ ಇತ್ತೀಚಿನ ಹೇಳಿಕೆಯು ಸ್ವೀಕಾರಾರ್ಹವಲ್ಲ. ಅವರು ಯಾವುದೇ ಕಾರಣಕ್ಕಾಗಿ ಈ ರೀತಿ ಮಾತನಾಡಿದ್ದರೂ ಇಂಥ ಅಸಭ್ಯ ಪದಬಳಕೆ ಖಂಡನೀಯ
ಕನಿಮೋಳಿ ಡಿಎಂಕೆ ಸಂಸದೆ

ಡಿಎಂಕೆಯ ಸಚಿವರೊಬ್ಬರೇ ಅಲ್ಲ ಪಕ್ಷದಲ್ಲಿನ ವ್ಯವಸ್ಥೆಯೇ ಅಶ್ಲೀಲವಾಗಿದೆ ಅಸಭ್ಯವಾಗಿದೆ
ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.