ಶ್ರೀನಗರ: ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಮಧ್ಯಾಹ್ನ 12.22ಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ.