ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಲಘು ಭೂಕಂಪ: ಭಯಭೀತರಾದ ಜನ

Published 15 ಅಕ್ಟೋಬರ್ 2023, 11:28 IST
Last Updated 15 ಅಕ್ಟೋಬರ್ 2023, 11:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಇಂದು (ಭಾನುವಾರ) ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಸಂಜೆ 4.09ಕ್ಕೆ ಭೂಮಿ ಕಂಪಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಎನ್‌ಸಿಎಸ್ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಹದಿನೈದು ದಿನಗಳಲ್ಲಿ ದೆಹಲಿಯಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಅ.3ರಂದು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿತ್ತು. ಜನರು ಭಯಭೀತರಾಗಿ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದರು.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT