ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ ಎಂದು ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ.

ದೆಹಲಿಯ ಜಲ ಮಂಡಳಿಯ (ಡಿಜೆಬಿ) ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 18ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ. ಇದು ಕೇಜ್ರಿವಾಲ್ ವಿರುದ್ಧ ದಾಖಲಾಗಿರುವ ಎರಡನೇ ಹಣ ಅಕ್ರಮ ವರ್ಗಾವಣೆ ಪ್ರಕರಣವಾಗಿದೆ.

'ಈ ಜಲಮಂಡಳಿ ಪ್ರಕರಣದ ಬಗ್ಗೆ ಯಾರಿಗೂ ತಿಳಿದಿಲ್ಲ. ಹೇಗಾದರೂ ಮಾಡಿ ಕೇಜ್ರಿವಾಲ್ ಅವರನ್ನು ಬಂಧಿಸಲು ಮತ್ತು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಲು ಮಾಡಿರುವ ಬ್ಯಾಕಪ್ ತಂತ್ರ ಇದಾಗಿದೆ' ಎಂದು ಎಎಪಿ ನಾಯಕಿ ಅತಿಶಿ ಆರೋಪಿಸಿದ್ದಾರೆ.

ರಾಜಕೀಯ ಎದುರಾಳಿಗಳನ್ನು ಮುಗಿಸಲು ಇ.ಡಿ ಹಾಗೂ ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡುತ್ತಿದೆ ಎಂದು ಅತಿಶಿ ಹೇಳಿದ್ದಾರೆ.

ಮತ್ತೊಂದೆಡೆ ದೆಹಲಿ ಅಬಕಾರಿ ಹಗರಣದ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ವಿರುದ್ಧ ಒಂಬತ್ತನೇ ಬಾರಿ ಇ.ಡಿ ಸಮನ್ಸ್ ಜಾರಿ ಮಾಡಿದೆ.

ಕಳೆದ ಎಂಟು ಬಾರಿ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು. ಸಮನ್ಸ್‌ಗಳಿಗೆ ಸ್ಪಂದಿಸದ ಬಗ್ಗೆ ಇ.ಡಿ ದಾಖಲಿಸಿದ್ದ ಎರಡು ದೂರುಗಳಿಗೆ ಸಂಬಂಧಿಸಿ ಕೇಜ್ರಿವಾಲ್ ಅವರಿಗೆ ದೆಹಲಿ ಕೋರ್ಟ್ ಶನಿವಾರ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.