ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Published 15 ಸೆಪ್ಟೆಂಬರ್ 2023, 7:29 IST
Last Updated 15 ಸೆಪ್ಟೆಂಬರ್ 2023, 7:29 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಎಎಪಿ ಸಂಚಾಲಕ ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಅಕ್ಟೋಬರ್‌ 4ಕ್ಕೆ ಮುಂದೂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರುವರಿ 26ರಂದು ಬಂಧಿಸಿತ್ತು.

ಇದೇ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇ.ಡಿ ಆರೋಪಿಸಿದೆ.

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಸಚಿವ ಸಂಪುಟಕ್ಕೆ ಸಿಸೋಡಿಯಾ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT