ಗೋವಾದ ಅರ್ಪೋರಾ ಗ್ರಾಮದಲ್ಲಿನ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್‌ಕ್ಲಬ್‌ನಲ್ಲಿ ಭಾನುವಾರ ತಡರಾತ್ರಿ ಹೊತ್ತಿಕೊಂಡ ಬೆಂಕಿಯನ್ನು ಅಗ್ನಿ ಶಾಮಕ ಸಿಬ್ಬಂದಿ ನಂದಿಸಿದರು
ಪಿಟಿಐ ಚಿತ್ರ
ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ದಿನಗಳಿವು. ಇಂಥ ಸಂದರ್ಭದಲ್ಲಿಯೇ ಅಗ್ನಿ ದುರಂತ ಘಟಿಸಿರುವುದು ದುರದೃಷ್ಟಕರ. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ಅವರಿಂದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು
ಪ್ರಮೋದ್ ಸಾವಂತ್, ಗೋವಾ ಮುಖ್ಯಮಂತ್ರಿ
ನಿಯಮ ಉಲ್ಲಂಘಿಸಿರುವ ನೈಟ್ ಕ್ಲಬ್ ವಿರುದ್ಧ ಸರ್ಕಾರ ಯಾಕೆ ಕೈಗೊಂಡಿಲ್ಲ. ಅಧಿಕಾರದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಸಾವಂತ್ ಅವರಿಗೆ ನೈತಿಕ ಹಕ್ಕು ಇಲ್ಲ
ಅಮಿತ್ ಪಾಲೇಕರ್, ಎಎಪಿ ಗೋವಾ ಘಟಕದ ಅಧ್ಯಕ್ಷ
ಆಡಳಿತ ಮತ್ತು ಸುರಕ್ಷತೆ ವಿಚಾರದಲ್ಲಿ ಕ್ರಿಮಿನಲ್ ವೈಫಲ್ಯವಾಗಿದೆ. ಪಾರದರ್ಶಕ ಮತ್ತು ಸಮಗ್ರ ತನಿಖೆ ನಡೆಸಬೇಕು. ಇಂತಹ ದುರಂತಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು
ರಾಹುಲ್ ಗಾಂಧಿ, ಲೋಕಸಭೆಯಲ್ಲಿ ವಿಪಕ್ಷ ನಾಯಕ
ತಪ್ಪಿಸಬಹುದಾಗಿದ್ದ ದುರ್ಘಟನೆ ಇದೆ. ತುಂಬಲಾರದ ನಷ್ಟವಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಉತ್ತರದಾಯಿತ್ವ ನಿಗದಿ ಮಾಡಬೇಕು
ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ
ಭಯಾನಕ ದುರಂತವಿದು. ಈ ಘಟನೆ ಗಂಭೀರ ಲೋಪಗಳತ್ತ ಬೊಟ್ಟು ಮಾಡುತ್ತದೆ. ಇಂತಹ ನಿರ್ಲಕ್ಷ್ಯ ಪುನರಾವರ್ತನೆಯಾಗದ ರೀತಿ ಕ್ರಮ ತೆಗೆದುಕೊಳ್ಳಬೇಕು