ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌: ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೇನ್‌ ರಾಜೀನಾಮೆ

Published 31 ಜನವರಿ 2024, 15:49 IST
Last Updated 31 ಜನವರಿ 2024, 15:49 IST
ಅಕ್ಷರ ಗಾತ್ರ

ಜಾರ್ಖಂಡ್‌: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಎದುರಿಸುತ್ತಿರುವ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮ ಸ್ಥಾನಕ್ಕೆ ಇಂದು ಸಂಜೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ಜೆಎಂಎಂ ಪಕ್ಷದ ಹಿರಿಯ ನಾಯಕ ಚಂಪೈ ಸೊರೇನ್‌ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ರಾಜೇಶ್‌ ಠಾಕೂರ್‌ ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ಏಳು ಗಂಟೆಗಳ ತನಿಖೆ‍ ಎದುರಿಸಿದ ಬಳಿಕ ರಾಜಭವನದಲ್ಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌ ಅವರಿಗೆ ಸೊರೇನ್‌ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಹಿನ್ನೆಲೆ: ಭೂಮಿಯ ಮಾಲೀಕತ್ವದ ಬದಲಾವಣೆ ವಹಿವಾಟು ಹಿಂದೆ ದೊಡ್ಡ ಮಾಫಿಯಾ ಇದ್ದು, ಹಲವು ಅಕ್ರಮಗಳು ನಡೆದಿವೆ ಎಂಬ ಆರೋಪ ಕುರಿತಂತೆ ತನಿಖೆ ನಡೆಯುತ್ತಿದೆ.

ಈ ಹಗರಣದ ಸಂಬಂಧ ಇ.ಡಿ ಅಧಿಕಾರಿಗಳು ಸದ್ಯ 2011ನೇ ತಂಡದ ಐಎಎಸ್‌ ಅಧಿಕಾರಿ ಛಾವಿ ರಂಜನ್‌,  ಜಾರ್ಖಂಡ್‌ನ ಕಂದಾಯ ಇಲಾಖೆಯ ಸಿಬ್ಬಂದಿ ಭಾನುಪ್ರಸಾದ್‌ ಪ್ರಸಾದ್‌ ಸೇರಿ 14 ಜನರನ್ನು ಬಂಧಿಸಿದ್ದಾರೆ. ಬಂಧಿತ ಐಎಎಸ್ ಅಧಿಕಾರಿ ರಾಂಚಿಯಲ್ಲಿ ಜಿಲ್ಲಾಧಿಕಾರಿಯಾಗಿ, ರಾಜ್ಯ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.  

ಅಧಿಕೃತ ಭೂ ದಾಖಲೆಗಳನ್ನು ತಿರುಚಿ ಭೂಮಿಯ ಮಾರಾಟಗಾರರು, ಖರೀದಿದಾರರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಈ ಮೂಲಕ ಕೊಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಸ್ವಾಧೀನ ಪಡೆಯಲಾಗಿದೆ ಎಂಬುದು ತನಿಖಾ ಸಂಸ್ಥೆ ಇ.ಡಿ ಆರೋಪವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT