ಚಂಡೀಗಢ: ಪಂಜಾಬ್ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೃಷ್ಟಿ ವರ್ಮಾ (20) ಮೃತ ಮಹಿಳೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ರಕ್ಷಿಸಿ ಸೊಹಾನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿನ್ನೆ (ಶನಿವಾರ) ಸಂಜೆ ವೇಳೆಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಕನಿಷ್ಠ ಐವರು ಸಿಲುಕಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ ಮಾಲೀಕರಾದ ಪರ್ವಿಂದರ್ ಸಿಂಗ್ ಮತ್ತು ಗಗನ್ದೀಪ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.