ಕೋಲ್ಕತ್ತ: ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಪ್ರತಿಭಟನಾ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ, ಜೆ.ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠವು ಮುಷ್ಕರ ನಿರತ ವೈದ್ಯರಿಗೆ ಕೆಲಸಕ್ಕೆ ಮರಳುವಂತೆ ಗುರುವಾರ ತಿಳಿಸಿದೆ.

ಕೆಲಸದ ಸ್ಥಳಗಳಲ್ಲಿ ನಮ್ಮನ್ನು ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದು ವೈದ್ಯರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದರು.

ಕೆಲಸದ ಸ್ಥಳಗಳಲ್ಲಿ ಸುರಕ್ಷತೆ ಕಲ್ಪಿಸುವಂತೆ ನಾವು ಅಧಿಕಾರಿಗಳಿಗೆ ಸೂಚಿಸುತ್ತೇವೆ. ವೈದ್ಯರು ಕೆಲಸ ಮಾಡದಿದ್ದರೆ ಸಾರ್ವಜನಿಕ ಆರೋಗ್ಯ ಸೇವೆಗಳು ನಡೆಯುವುದು ಹೇಗೆ? ಮೊದಲು ಕೆಲಸಕ್ಕೆ ಮರಳುವಂತೆ ನ್ಯಾಯಪೀಠ ಹೇಳಿತು.

ಮತ್ತೆ ನಿಮಗೆ ತೊಂದರೆಯಾದರೆ ನಮ್ಮ ಬಳಿಗೆ ಬನ್ನಿ, ಮೊದಲು ಕೆಲಸಕ್ಕೆ ಮರಳಿ ಎಂದು ನ್ಯಾಯಪೀಠ ಹೇಳಿದೆ.

ಕೋಲ್ಕತ್ತದ ಆರ್.ಜಿ. ಕರ್ ವೈದ್ಯ ಕಾಲೇಜಿನಲ್ಲಿ ಕರ್ತವ್ಯ ನಿರತ 32 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.