ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಸ್ತವ ಗಡಿ ಸ್ಥಿತಿ : ನಿರಂತರ ನಿಗಾ: ವಾಯುಪಡೆ ಮುಖ್ಯಸ್ಥ ವಿ.ಆರ್. ಚೌಧರಿ

Published 3 ಅಕ್ಟೋಬರ್ 2023, 14:10 IST
Last Updated 3 ಅಕ್ಟೋಬರ್ 2023, 14:10 IST
ಅಕ್ಷರ ಗಾತ್ರ

ನವದೆಹಲಿ: ವಿಶೇಷವಾಗಿ ಪೂರ್ವ ಲಡಾಖ್‌ ಸೇರಿದಂತೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ(ಎಲ್ಎಸಿ)ಯಲ್ಲಿನ ಪರಿಸ್ಥಿತಿ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದಿನ ಏಳೆಂಟು ವರ್ಷಗಳಲ್ಲಿ ₹2.5 ಲಕ್ಷದಿಂದ ₹3 ಲಕ್ಷ ಕೋಟಿ ಮೌಲ್ಯದ ಯುದ್ಧ ಸಲಕರಣೆಗಳು, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಭಾರತೀಯ ವಾಯುಪಡೆ ಚಿಂತನೆ ನಡೆಸಿದೆ. ಜತೆಗೆ ಹೆಚ್ಚುವರಿಯಾಗಿ 97 ಲಘು ಯುದ್ಧ ವಿಮಾನ ತೇಜಸ್ ಮಾರ್ಕ್ 1–ಎ ಅನ್ನು ಖರೀದಿಸಲು ಯೋಜಿಸುತ್ತಿದೆ’ ಎಂದು ಹೇಳಿದರು. 

ರಷ್ಯಾದಿಂದ ಮೂರು ಎಸ್-400 ಕ್ಷಿಪಣಿ ವ್ಯವಸ್ಥೆಗಳು ಭಾರತದ ವಾಯುಪಡೆಗೆ ಸೇರ್ಪಡೆಯಾಗಿದ್ದು, ಉಳಿದ ಎರಡು ಕ್ಷಿಪಣಿಗಳು ಮುಂದಿನ ವರ್ಷದೊಳಗೆ ಬರುವ ಸಾಧ್ಯತೆಯಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT