ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರ ಧ್ವನಿಯಾಗಲಿದೆ: ರಾಹುಲ್ ಗಾಂಧಿ​

Published 14 ಮಾರ್ಚ್ 2024, 9:41 IST
Last Updated 14 ಮಾರ್ಚ್ 2024, 9:41 IST
ಅಕ್ಷರ ಗಾತ್ರ

ನಾಸಿಕ್: 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರೈತರ ಧ್ವನಿಯಾಗಲಿದೆ ಮತ್ತು ರೈತರನ್ನು ರಕ್ಷಿಸಲು ನೀತಿಗಳನ್ನು ರೂಪಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.

ಗುರುವಾರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಚಂದವಾಡದಲ್ಲಿ ನಡೆದ 'ಭಾರತ ಜೋಡೊ ನ್ಯಾಯ ಯಾತ್ರೆ' ಭಾಗವಾಗಿ ರೈತರ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಭಾಗಿಯಾಗಿದ್ದರು.

'ಇಂಡಿಯಾ ಮೈತ್ರಿ ಕೂಟ ರೈತರ ಧ್ವನಿಯಾಗಲಿದೆ. ಅವರ ಹಿತಾಸಕ್ತಿಯನ್ನು ರಕ್ಷಿಸಲು ಕೆಲಸ ಮಾಡಲಿದೆ. ನಮ್ಮ ಹಾಗೂ ಇಂಡಿಯಾ ಮೈತ್ರಿ‌ಕೂಟ ಸರ್ಕಾರದ ಬಾಗಿಲು ಯಾವಾಗಲೂ ರೈತರಿಗೆ ತೆರೆದಿರಲಿದೆ' ಎಂದು ಅವರು ಹೇಳಿದರು.

ರೈತರ ಸಾಲ ಮನ್ನಾ, ಬೆಳೆಗಾರರಿಗೆ ಅನುಕೂಲವಾಗುವಂತೆ ಬೆಳೆ ವಿಮಾ ಯೋಜನೆಯ ಪುನಾರಚನೆ ಹಾಗೂ ಕೃಷಿ ಉತ್ಪನ್ನಗಳ ಬೆಲೆ ಕಾಯ್ದುಕೊಳ್ಳಲು ಅಗತ್ಯವಿರುವ ರಫ್ತು ಮತ್ತು ಆಮದು ನೀತಿಯನ್ನು ರೂಪಿಸಲಾಗುವುದು. ಜತೆಗೆ ಕೃಷಿ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ಸರ್ವ ಪ್ರಯತ್ನ ನಡೆಸಲಾಗುವುದು ಎಂದರು.

ಅಲ್ಲದೇ ಸ್ವಾಮಿನಾಥನ್ ಸಮಿತಿಯ ವರದಿಯ ಪ್ರಕಾರ ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್‌ಪಿ) ಕಾನೂನು ಖಾತರಿ ನೀಡುವ ಕಾಂಗ್ರೆಸ್‌ನ ಭರವಸೆಯನ್ನೂ ಅವರು ಪುನರುಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT