ನವದೆಹಲಿ: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್ಟಿಎ) ಮಾತುಕತೆ ಪೂರ್ಣಗೊಂಡಿರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದು, ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ ಎಂದಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಮಾತನಾಡಿದ ಅವರು, ‘ಭಾರತ-ಐರೋಪ್ಯ ಒಕ್ಕೂಟದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಐರೋಪ್ಯ ಒಕ್ಕೂಟದ ನಾಯಕರಾದ ಉರ್ಸುಲಾ ಫಾಂಡರ್ ಲೇಯನ್ ಮತ್ತು ಆ್ಯಂಟೊನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದ್ದಾರೆ’ ಎಂದು ಶ್ಲಾಘಿಸಿದ್ದಾರೆ.

‘ಜಾಗತಿಕ ಸವಾಲುಗಳನ್ನು ಎದುರಿಸಲು ಸಾಮೂಹಿಕ ಪ್ರಯತ್ನಗಳು ಮಹತ್ವದ್ದಾಗಿರುತ್ತವೆ. ಆದೇ ರೀತಿ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ (ಎಫ್ಟಿಎ) ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯವು ಆಶಾದಾಯಕವಾಗಿದೆ’ ಎಂದು ಅವರು ಬಣ್ಣಿಸಿದ್ದಾರೆ.

‘ಜಾಗತಿಕ ಅನಿಶ್ಚಿತತೆಯ ಈ ಸಂದರ್ಭದಲ್ಲಿ ನಮ್ಮ ಆಲೋಚನೆಗಳು ಮತ್ತು ದೃಷ್ಟಿಕೋನಗಳು ಒಂದೇ ಆಗಿವೆ. ಜಾಗತಿಕ ಸವಾಲುಗಳನ್ನು ಸಾಮೂಹಿಕ ಪ್ರಯತ್ನಗಳ ಮೂಲಕ ಮಾತ್ರ ಪರಿಹರಿಸಬಹುದು. ಆದರೆ ಅಂತರರಾಷ್ಟ್ರೀಯ ಸಂಪ್ರದಾಯಗಳನ್ನು ದುರ್ಬಲಗೊಳಿಸಬಾರದು. ಬದಲಿಗೆ, ಸಮಕಾಲೀನ ವಾಸ್ತವಗಳಿಗೆ ಹೊಂದಿಕೊಳ್ಳಲು ನಿಟ್ಟಿನಲ್ಲಿ ಸಂಬಂಧಗಳು ಸುಧಾರಿಸಬೇಕು’ ಎಂದು ತಿಳಿಸಿದ್ದಾರೆ.

‘ಭಾರತ-ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ವೈಶಿಷ್ಟ್ಯ ಪೂರ್ಣ ಒಪ್ಪಂದವಾಗಿದೆ. ಭದ್ರತೆ, ರಕ್ಷಣಾ ಪಾಲುದಾರಿಕೆ, ಸಹಕಾರ ಸೇರಿದಂತೆ ತೀರ್ಮಾನಿಸಲಾದ ಪ್ರಮುಖ ಒಪ್ಪಂದಗಳು ಭಾರತ-ಐರೋಪ್ಯ ಒಕ್ಕೂಟದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದಿದ್ದಾರೆ.

‘ಎಲ್ಲ ಒಪ್ಪಂದಗಳ ತಾಯಿ’ ಎಂದು ಬಣ್ಣಿಸಲಾಗಿರುವ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಪೂರ್ಣಗೊಂಡಿದೆ ಎಂದು ಭಾರತ ಮತ್ತು ಐರೋಪ್ಯ ಒಕ್ಕೂಟ ಮಂಗಳವಾರ ಘೋಷಿಸಿವೆ.

ಈ ಒಪ್ಪಂದವು ಜಾರಿಗೆ ಬಂದ ನಂತರದಲ್ಲಿ ಭಾರತದಿಂದ ಐರೋಪ್ಯ ಒಕ್ಕೂಟದ ದೇಶಗಳಿಗೆ ರಫ್ತಾಗುವ ಶೇಕಡ 93ರಷ್ಟು ಉತ್ಪನ್ನಗಳು ಸುಂಕ ರಹಿತವಾಗಿ ಅಲ್ಲಿನ ಮಾರುಕಟ್ಟೆ ಪ್ರವೇಶಿಸಲಿವೆ. ಅಲ್ಲದೆ, ಐರೋಪ್ಯ ಒಕ್ಕೂಟದ ದೇಶಗಳ ಐಷಾರಾಮಿ ಕಾರುಗಳು ಹಾಗೂ ವೈನ್ಗಳ ಬೆಲೆಯು ಭಾರತದಲ್ಲಿ ಕಡಿಮೆ ಆಗಲಿದೆ.
.‘ಒಪ್ಪಂದಗಳ ತಾಯಿ’ಗೆ ದಾರಿ ‘ಮುಕ್ತ’: ಭಾರತದ ಇತಿಹಾಸ ಕಂಡ ಅತಿದೊಡ್ಡ ಒಪ್ಪಂದ ಅಂತಿಮ.ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ.ಭಾರತ–ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ ಹೇಳಿದ್ದೇನು?.ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ವ್ಯಾಪಾರ ಒಪ್ಪಂದ ಕುರಿತು ಮಂಗಳವಾರ ಘೋಷಣೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.