ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳು ಇಂದು (ಮಂಗಳವಾರ) ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.

ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು. ದಾಳಿ ನಡೆಸಿದ ಉಗ್ರರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಈ ಕುರಿತು ನೇರ ಪ್ರಸಾರ ಮಾಡುವುದು ಅಥವಾ ‘ಮೂಲಗಳನ್ನು ಉಲ್ಲೇಖಿಸಿ’ ವರದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಶನಿವಾರ ಸೂಚನೆ ನೀಡಿದೆ.

ಈ ಹಿನ್ನೆಲೆ ಕಾರ್ಯಾಚರಣೆಯ ಬಗ್ಗೆ ಹೆಚ್ಚಿನ ವಿವರ ತಿಳಿದು ಬಂದಿಲ್ಲ.

‘ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಇಂತಹ ವರದಿಗಳ ಪ್ರಸಾರ/ಪ್ರಕಟಣೆ ಬೇಡ. ಕಾರ್ಯಾಚರಣೆ ಪೂರ್ಣಗೊಳ್ಳುವುದಕ್ಕೂ ಮೊದಲೇ ವಿವರಗಳನ್ನು ಬಹಿರಂಗಪಡಿಸಿದಲ್ಲಿ ಅದು ದೇಶವಿರೋಧಿ ಶಕ್ತಿಗಳಿಗೆ ಅನುಕೂಲವಾಗಬಹುದು’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುದ್ದಿವಾಹಿನಿಗಳಿಗೆ ಸೂಚಿಸಿದೆ.
.ಸೇನೆ ಕಾರ್ಯಾಚರಣೆ | ನೇರ ಪ್ರಸಾರ, ಚರ್ಚೆ ಬೇಡ: ಮಾಧ್ಯಮಗಳಿಗೆ ಕೇಂದ್ರ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.