ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರದ ಶಾಸಕರು ನಾಳೆ (ಗುರುವಾರ) ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಸಚಿವರಿಗೆ ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಬೋಧಿಸಲಿದ್ದಾರೆ. ನಾಳೆಯೇ ಸ್ಪೀಕರ್ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈಗಾಗಲೇ ಸಚಿವರ ಪಟ್ಟಿ ಅಂತಿಮವಾಗಿದ್ದು ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಜೇಶ್ ಠಾಕೂರ್ ಹೇಳಿದ್ದಾರೆ.

ಕಾಂಗ್ರೆಸ್ಗೆ ನಾಲ್ಕು ಸಚಿವ ಸ್ಥಾನಗಳು ಹಾಗೂ ಆರ್ಜೆಡಿ ಪಕ್ಷಕ್ಕೆ ಒಂದು ಸಚಿವ ಸ್ಥಾನ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 9ರಿಂದ 12ರವರೆಗೆ ವಿಧಾನಸಭಾ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.