ನವದೆಹಲಿ: 'ಕರ್ನಾಟಕದಲ್ಲಿ ಕಾಂಗ್ರೆಸ್ ಭೂಕಬಳಿಕೆ ಮತ್ತು ಭ್ರಷ್ಟಾಚಾರ ನಡೆಸುತ್ತಿದೆ’ ಎಂದು ಬಿಜೆಪಿ ಆರೋಪಿಸಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಮಾಧ್ಯಮ ವರದಿಯನ್ನು ಉಲ್ಲೇಖಿಸಿ, ‘ಕರ್ನಾಟಕದಲ್ಲಿ ಆಡಳಿತ ಪಕ್ಷದ 100 ಕಚೇರಿಗಳ ನಿರ್ಮಾಣಕ್ಕಾಗಿ, ಸಿದ್ಧರಾಮಯ್ಯ ಸರ್ಕಾರವು 24 ಸರ್ಕಾರಿ ನಿವೇಶನಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ವರ್ಗಾಯಿಸಿದೆ’ ಎಂದು ಆರೋಪಿಸಿದರು.

‘ಕರ್ನಾಟಕದ ಜನರಿಗೆ ನಾಗರಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಮೀಸಲಿರಿಸಿದ್ದ ಅಂದಾಜು ₹50 ಕೋಟಿ ಮೊತ್ತದ 24 ನಿವೇಶನಗಳನ್ನು ರಾಜ್ಯ ಸರ್ಕಾರವು, ಆಡಳಿತ ಪಕ್ಷಕ್ಕೆ ಕೇವಲ ₹2 ಕೋಟಿಗೆ ಹಂಚಿಕೆ ಮಾಡಿದೆ. ಇದರದಲ್ಲಿ ₹48 ಕೋಟಿಯ ಭ್ರಷ್ಟಾಚಾರ ನಡೆದಿರುವುದು ಸ್ಪಷ್ಟವಾಗಿ ಕಣ್ಣಿಗೆ ಕಾಣಿಸುತ್ತದೆ’ ಎಂದರು.

‘ಮುಖ್ಯಮಂತ್ರಿ ಕುರ್ಚಿಗಾಗಿ ಗುದ್ದಾಟ ನಡೆಸಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ಗಾಂಧಿ ಕುಟುಂಬವನ್ನು ಮೆಚ್ಚಿಸಲು, ನಿವೇಶನಗಳನ್ನು ಕಾಂಗ್ರೆಸ್ ಭವನ ಟ್ರಸ್ಟ್ಗೆ ವರ್ಗಾಯಿಸಿದ್ದಾರೆ. ರಾಹುಲ್ ಗಾಂಧಿ ಅವರ ಮೂಗಿನ ಕೆಳಗೆ ಭ್ರಷ್ಟಾಚಾರ ನಡೆಯುತ್ತಿದೆ. ಕರ್ನಾಟಕದ ಜನರನ್ನು ಇವರು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಎಂಬ ಪದಕ್ಕೆ ಕಾಂಗ್ರೆಸ್ ಸಮಾನಾರ್ಥಕ ಪದವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.