ಪಂಜಾಬ್: ಸಾವಿರಕ್ಕೂ ಅಧಿಕ ಗ್ರಾಮಗಳಿಗೆ ಹಾನಿ
ಚಂಡೀಗಢ: ಪಂಜಾಬ್‌ನಲ್ಲಿ ಪ್ರವಾಹದಿಂದಾಗಿ ಒಂದು ಸಾವಿರಕ್ಕೂ ಅಧಿಕ ಗ್ರಾಮಗಳಿಗೆ ಮತ್ತು 6100 ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೀಡಿತ ಪ್ರದೇಶದಿಂದ ಈವರೆಗೆ 11330 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.