ತಿರುವನಂತಪುರ: ಕೇಂದ್ರ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಯತ್ನಿಸುವ ಮೂಲಕ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಆರೋಪಿಸಿದರು.

ಚುನಾವಣಾ ಆಯೋಗ ಸೇರಿದಂತೆ ಸಾಂವಿಧಾನಿಕ ಸಂಸ್ಥೆಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಅದು ಮುಂದಾಗುತ್ತಿದೆ ಎಂದು ದೂರಿದರು.

ಕೇಂದ್ರೀಯ ಮಾಹಿತಿ ಆಯೋಗವು ರಾಜಕೀಯ ವ್ಯವಸ್ಥೆಯ ಇಚ್ಛೆಯ ಅನುಸಾರ ಕಾರ್ಯನಿರ್ವಹಿಸಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಮಾಹಿತಿ ಹಕ್ಕು ಕಾಯ್ದೆಗೆ (ಆರ್ಟಿಐ) ತಿದ್ದುಪಡಿ ಮಾಡಲಾಗಿದೆ ಎಂದು ಹರಿಹಾಯ್ದರು.

ರಾಜ್ಯ ಮಾಹಿತಿ ಆಯೋಗವು ಆಯೋಜಿಸಿದ್ದ ವಿಚಾರಗೋಷ್ಠಿ ವೇಳೆ ಮಾತನಾಡಿದ ಅವರು, ‘ಇದು ಬಹಳ ಅಪಾಯಕಾರಿ. ಈ ನಡೆಯು ನಮ್ಮ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ದುರ್ಬಲಗೊಳಿಸಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ಆರ್ಟಿಐ ಬಹುಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ಕಾಲಕ್ಕೆ ಅನುಗುಣವಾಗಿ ಕಾಯ್ದೆಯಲ್ಲಿ ಸುಧಾರಣೆಗಳನ್ನು ತರುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.