ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Lok Sabha Election 2024: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ

Published 9 ಜನವರಿ 2024, 12:24 IST
Last Updated 9 ಜನವರಿ 2024, 12:24 IST
ಅಕ್ಷರ ಗಾತ್ರ

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಬಿಜೆಪಿ ಅಧಿಕಾರಕ್ಕೆ ಬರುವುದಂತೂ ಖಚಿತ. 400 ಅಥವಾ 450 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದೆ ಎಂಬುದಷ್ಟೇ ಮುಂದಿರುವ ಪ್ರಶ್ನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಗೆಲುವಿಗೆ ತಮಿಳುನಾಡಿನ ಕೊಡುಗೆ ಎಷ್ಟು? ದೇಶದ ವಿವಿಧ ಭಾಗಗಳ ಪಾಲುದಾರಿಕೆ ಏನು ಎಂಬುದು ಈಗಿನ ಚರ್ಚೆಯ ವಿಷಯ ಎಂದು ಅವರು ಹೇಳಿದ್ದಾರೆ.

2024 ಬಿಜೆಪಿ ಪಾಲಿಗೆ ಐತಿಹಾಸಿಕ ವರ್ಷ ಆಗಿರಲಿದೆ. ಸ್ಥಿರ ಸರ್ಕಾರ ಹಾಗೂ ದೃಢವಾದ ಪ್ರಧಾನಿಯನ್ನು ಜನರು ಬಯಸುತ್ತಿದ್ದಾರೆ. ದೇಶಕ್ಕೆ ಬಲಿಷ್ಠ ಪ್ರಧಾನಿ ಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಯು ರಾಜ್ಯಗಳನ್ನು ಅವಲಂಬಿಸಿಲ್ಲ. ಹಾಗಾಗಿ ತಮಿಳುನಾಡಿನಲ್ಲೂ ಬಿಜೆಪಿ ಗಮನಾರ್ಹ ಸಾಧನೆ ಮಾಡಲಿದ್ದು, ರಾಜ್ಯದಿಂದ ಬಿಜೆಪಿ ಅಭ್ಯರ್ಥಿಗಳು ಗೆದ್ದು ಇತಿಹಾಸ ರಚಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಡಿಎಂಕೆ ಪಕ್ಷದ ರಾಜಕೀಯ ಬಯಲಾಗಿದೆ. ಜನರಿಗೆ ನೈಜತೆಯ ಅರಿವಾಗಿದೆ. ಡಿಎಂಕೆ ಸಿದ್ಧಾಂತವನ್ನು ತಿರಸ್ಕರಿಸುವ ಸಮಯ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT