ಪ್ರಯಾಗರಾಜ್ (ಉತ್ತರ ಪ್ರದೇಶ): ಮಹಾಶಿವರಾತ್ರಿಯ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದ ಕೊನೆಯ ದಿನವಾದ ಭಾನುವಾರ ಬೆಳಿಗ್ಗೆ 10 ಗಂಟೆಯ ಒಳಗೆ ಸುಮಾರು 21 ಲಕ್ಷ ಭಕ್ತರು ಗಂಗಾ ನದಿ ಮತ್ತು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ರಾತ್ರಿಯಿಂದಲೇ ಭಕ್ತರು ಮೇಳ ಪ್ರದೇಶಕ್ಕೆ ಆಗಮಿಸಿ ಸ್ನಾನ ಮಾಡುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವೇಳೆಗೆ 21 ಲಕ್ಷ ಮಂದಿ ಗಂಗಾ ಮತ್ತು ಸಂಗಮದಲ್ಲಿ ಸ್ನಾನ ಮಾಡಿದ್ದಾರೆ ಎಂದು ಮಾಘ ಮೇಳದ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಮಾಘಮೇಳ: 4.52 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ.ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ.
ಎಲ್ಲಾ ಘಾಟ್ಗಳಲ್ಲಿ ಸಮರ್ಪಕ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಜೊತೆಗೆ ದೋಣಿಗಳು ಮತ್ತು ಈಜುಗಾರರನ್ನೂ ನಿಯೋಜಿಸಲಾಗಿದೆ ಎಂದು ಪ್ರಯಾಗರಾಜ್ ಜಿಲ್ಲಾಧಿಕಾರಿ ಮನೀಶ್ ಕುಮಾರ್ ವರ್ಮಾ ತಿಳಿಸಿದ್ದಾರೆ,

ಎಲ್ಲಾ ಘಾಟ್ಗಳಲ್ಲಿ ಭಕ್ತರಿಗೆ ಕೊಠಡಿ, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮೇಳದ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ಗಳ ಮೂಲಕ ನಿಗಾ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.