ಮಹಾಕುಂಭನಗರ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು (ಬುಧವಾರ) ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಕಾಲ್ತುಳಿತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಮಾಹಿತಿ ಪಡೆದಿದ್ದು, ಘಟನಾ ಸ್ಥಳದಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ’ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.

ಮಹಾಕುಂಭ ನಗರದ ತ್ರಿವೇಣಿ ಮಾರ್ಗ, ಕಾಳಿ ಮಾರ್ಗ ಸೇರಿದಂತೆ ಸಂಗಮದ ಸುತ್ತಮುತ್ತಲಿನ ರಸ್ತೆಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಜನರ ನಿಯಂತ್ರಣಕ್ಕೆ ಅಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ಭಕ್ತರ ಓಡಾಟಕ್ಕೆ ಅನುಕೂಲವಾಗಲು ಈ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇತರ ರಾಜ್ಯ, ದೇಶಗಳಿಂದ ಬರುವ ವಾಹನಗಳಿಗೆ ನಗರದ ಹೊರವಲಯದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಸಂಗಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಮೌನಿ ಅಮಾವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚುವ ಕಾರಣ ಐದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇಂಟಿಗ್ರೇಟೆಡ್ ಕಂಟ್ರೋಲ್ ಮತ್ತು ಕಮಾಂಡ್ ಸೆಂಟರ್ ಸಂಗಮದ ಬಳಿ ನಿಗಾ ಇರಿಸಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ 3 ಕೋಟಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ. ಮಂಗಳವಾರ ರಾತ್ರಿಯಿಂದಲೇ ಮೌನಿ ಅಮಾವಾಸ್ಯೆಯ ಅಮೃತ ಸ್ನಾನ ಆರಂಭವಾಗಲಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ಮೌನಿ ಅಮಾವಾಸ್ಯೆ; ಮಹಾಕುಂಭ ಮೇಳದತ್ತ ಲಕ್ಷಾಂತರ ಭಕ್ತರ ದಂಡು: ಭದ್ರತೆ ಹೆಚ್ಚಳ.ಮಹಾಕುಂಭ ಮೇಳ: ಪಾಪ ಕಳೆದುಕೊಳ್ಳಲು ಪ್ರಯಾಗರಾಜ್ಗೆ ಹೋಗಿದ್ದ ಮದ್ಯ ಸಾಗಣೆದಾರ ಬಂಧನ.ಮಹಾಕುಂಭ ಮೇಳ | ಸನಾತನ ವೇದಿಕ ರಾಷ್ಟ್ರ ನಿರ್ಮಾಣ: ‘ಧಾರ್ಮಿಕ ಸಂವಾದ ಸಭೆ’ ನಿರ್ಣಯ.ಮಹಾಕುಂಭ ಮೇಳ | ರಾತ್ರಿ ಮದುವೆ ಸಲ್ಲ: ಹಿಂದೂ ನೀತಿ ಸಂಹಿತೆ.VIDEO: ಮಹಾಕುಂಭ ಮೇಳ; 8.81 ಕೋಟಿ ಭಕ್ತರಿಂದ ಪವಿತ್ರ ಸ್ನಾನ.ಫ್ಯಾಕ್ಟ್ ಚೆಕ್: ಮಹಾಕುಂಭ ಮೇಳಕ್ಕೆ ಬಿಲ್ ಗೇಟ್ಸ್ ಬಂದಿರುವುದು ಸುಳ್ಳು ಸುದ್ದಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.