ಮುಂಬೈ: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚುನಾವಣೆ ಸಂಬಂಧಿತ ಯಾವುದೇ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುವುದಿಲ್ಲ. ಫೆಬ್ರುವರಿ 7ರಂದು ನಡೆಯಲಿರುವ ಚುನಾವಣೆಗೆ ಸ್ಥಳೀಯ ನಾಯಕರು ಮತ್ತು ಪಕ್ಷದ ಪದಾಧಿಕಾರಿಗಳು ಪ್ರಚಾರ ಮಾಡುವಂತೆ ಫಡಣವೀಸ್ ಶನಿವಾರ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಫಡಣವೀಸ್ ಅವರು ಏಳು ದಿನಗಳಲ್ಲಿ 22 ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗೆ ಚುನಾವಣೆ ನಡೆಯಲಿದ್ದು, ಫೆಬ್ರುವರಿ 5ರಂದು ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ.

ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಫೆ.5ರಂದು ನಿಗದಿಯಾಗಿದ್ದ ಮತದಾನ 7ರಂದು ಮುಂದೂಡಲಾಗಿದೆ ಮತ್ತು ಮತ ಎಣಿಕೆ ಫೆ. 9ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.